ಚಿಕ್ಕಮಗಳೂರು: ವಲಸಿಗರಿಗೆ ಟಿಕೆಟ್ ಕೊಡದಂತೆ ಕೈ ಕಾರ್ಯಕರ್ತರ ಗಲಾಟೆ - ಈಟಿವಿ ಭಾರತ ಕನ್ನಡ
ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಕೈ ಕಾರ್ಯರ್ತರ ನಡುವೆ ಗಲಾಟೆ ನಡೆದಿರುವ ಘಟನೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಕಾಂಗ್ರೆಸ್ನಲ್ಲಿ ಮೂಲ ಮತ್ತು ವಲಸಿಗ ಟಿಕೆಟ್ ಆಕಾಂಕ್ಷಿಗಳ ಫೈಟ್ ಜೋರಾಗಿ ನಡೆಯುತ್ತಿದೆ. ಈ ವೇಳೆ ಹೊಸಬರಿಗೆ ಟಿಕೆಟ್ ನೀಡದಂದೆ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಬಿಟ್ಟು ಹೆಚ್ ಡಿ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಯಾವುದೇ ಕಾರಣಕ್ಕೂ ವಲಸಿಗರಿಗೆ ಟಿಕೆಟ್ ನೀಡಬಾರದು ಎಂದು ಮೂಲ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರದ ಕೆ ಎಂ ರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಸಭೆ ನಡೆಯುತ್ತಿತ್ತು. ಈ ವೇಳೆ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೂನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಮಾತಿಗೆ ಮುಂದಾಗುತ್ತಿದ್ದಂತೆ ಅಸಮಾಧಾನ ಸ್ಫೋಟವಾಗಿದೆ. ಅವರ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ. ನಂತರ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ.
ಇದನ್ನೂ ಓದಿ:ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ನಿಕ್ಕಿ: ಏಪ್ರಿಲ್ 10 ರ ಬಳಿಕ ಪ್ರಕಟ ಸಾಧ್ಯತೆ