ಬಾಗಲಕೋಟೆ, ಬೀಳಗಿಯಲ್ಲಿ ನಟ ಸುದೀಪ್ ರೋಡ್ ಶೋ - ಶಾಸಕ ವೀರಣ್ಣ ಚರಂತಿಮಠ
ಬಾಗಲಕೋಟೆ : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದು, ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಿದರು. ಇಂದು ಬೀಳಗಿ ಮತ್ತು ಬಾಗಲಕೋಟೆಯಲ್ಲಿ ಕಿಚ್ಚ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಸೇರಿರುವುದು ಗಮನ ಸೆಳೆಯಿತು.
ಬೀಳಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಮುರುಗೇಶ್ ಆರ್ ನಿರಾಣಿ ಪರ ನಗರದ ಶಿವಾಜಿ ಸರ್ಕಲ್ನಿಂದ ಆರಂಭವಾದ ಬೃಹತ್ ರೋಡ್ ಶೋ ಬಸವೇಶ್ವರ ಸರ್ಕಲ್, ಡಾ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಸಾಗಿ ಮುಂದೆ ಗಾಂಧಿ ಸರ್ಕಲ್ನಲ್ಲಿ ಕೊನೆಗೊಂಡಿತು. ನಂತರ ಬಾಗಲಕೋಟೆ ನಗರಕ್ಕೆ ಆಗಮಿಸಿದ ಚಿತ್ರ ನಟ ಸುದೀಪ್ ಬಸವೇಶ್ವರ ವೃತ್ತದಲ್ಲಿ ಅಪಾರ ಜನಸ್ತೋಮ ಮಧ್ಯೆ ರೋಡ್ ಶೋ ನಡೆಸಿದರು. ಬಸವೇಶ್ವರ ವೃತ್ತದಿಂದ ಪ್ರಮುಖ ರಸ್ತೆಯಲ್ಲಿ ಸಂಚಾರ ಮಾಡಿ, ಶಾಸಕ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಎಸ್ ಸಿ ಮೋರ್ಚಾ ರಾಜಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಬಜರಂಗದಳ ನಮ್ಮ ಸಂಸ್ಕೃತಿ, ಅವ್ರು ಧರ್ಮ ರಕ್ಷಣೆ ಮಾಡುವವರು: ಸಿಎಂ ಬೊಮ್ಮಾಯಿ