ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ - ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಇಂದು ಅಗ್ನಿ ಅವಘಡ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಹತ್ತಿರುದ ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಬಳಿಕ ಬೆಂಕಿಯ ವ್ಯಾಪಕ ಹೆಚ್ಚುವಾಗುತ್ತಿದ್ದಂತೆ ಕೆಲ ಸಮಯ ಕಾರ್ಖಾನೆ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳೀಯರು ಈ ಬಗ್ಗೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ:ಗುಜರಿ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ ಮೌಲ್ಯದ ಸಾಮಗ್ರಿ ಭಸ್ಮ