ಹಾವೇರಿ: ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ.. ಐವರಿಗೆ ಗಾಯ - ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕ
ಹಾವೇರಿ : ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಐವರು ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ. ರಾಣೆಬೆನ್ನೂರಿನ ಮಾರುತಿ ನಗರದಲ್ಲಿರುವ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ :ಫೋಮ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರು ಸಾವು, 6 ಮಂದಿಯ ಸ್ಥಿತಿ ಗಂಭೀರ
ಶ್ರೀಕಾಂತ್ ಎಂಬುವವರಿಗೆ ಸೇರಿದ ಸ್ಪಾರ್ಕ್ ಕ್ಯಾಂಡಲ್ ಕಂಪನಿಯ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ. ಅವಘಡದಲ್ಲಿ ಕ್ಯಾಂಡಲ್ಗಳು ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ರಾಣೆಬೆನ್ನೂರು ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ :ರಾತ್ರಿ ಮಲಗಿದ್ದ ವೇಳೆ ಎರಗಿದ ಜವರಾಯ, ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ 6 ಮಂದಿ ಬಲಿ