ಪೊಲೀಸ್ ಠಾಣೆ ಆವರಣದಲ್ಲಿ ಅಗ್ನಿ ಅವಘಡ: 61 ವಾಹನಗಳಿಗೆ ಹಾನಿ - ETV Bharat kannada News
ಹೊಸಕೋಟೆ (ಬೆಂಗಳೂರು ಗ್ರಾ) : ತಾಲೂಕಿನ ಆವಲಹಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅನೇಕ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ವಾಹನಗಳು ಹಾನಿಗೊಂಡಿವೆ. ಇಂದು ಮಧ್ಯಾಹ್ನ ಠಾಣೆಯ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಾಂಪೌಂಡ್ನಲ್ಲಿ ನಿಲ್ಲಿಸಿದ್ದ ವಾಹನಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಐಜಿಪಿ ರವಿಕಾಂತೇಗೌಡ, ಘಟನೆಯಲ್ಲಿ ಹಲವು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 8 ಕಾರುಗಳು, 8 ಆಟೋ, 45 ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ. ಆದರೆ ಠಾಣೆಯಲ್ಲಿನ ಯಾವುದೇ ಸ್ವತ್ತು ಮತ್ತು ದಾಖಲೆಗಳಿಗೆ ಹಾನಿಯಾಗಿಲ್ಲ. ಪೊಲೀಸ್ ಠಾಣೆ ಆವರಣದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣ ಕೂಡ ದಾಖಲಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ :ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ