ಚಾಮರಾಜನಗರ: ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡ.. ಧಗಧಗಿಸಿದ ಲಾಡು ತಯಾರಿಕ ಕೇಂದ್ರ - ವಿಡಿಯೋ - ETV Bharat Karnataka
Published : Dec 1, 2023, 4:23 PM IST
ಚಾಮರಾಜನಗರ :ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ ಘಟನೆ ಮಧ್ಯಾಹ್ನ ವೇಳೆ ನಡೆದಿದ್ದು, ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಘಟಕದಲ್ಲಿರುವ ಸಿಲಿಂಡರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಇದನ್ನು ನಂದಿಸುವುದರೊಳಗೆ ಘಟಕದಲ್ಲಿ ಸಿಹಿ ಜಿಡ್ಡು ಹಾಗೂ ಎಣ್ಣೆ ಪದಾರ್ಥ ಇದ್ದ ಪರಿಣಾಮ ಎಲ್ಲೆಡೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಲಾಡು ತಯಾರಿಕ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಸದ್ಯ ಈ ಸಂದರ್ಭದಲ್ಲಿ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಇನ್ನಷ್ಟು ಈ ಬಗ್ಗೆ ಪ್ರತಿಕ್ರಿಯೆ ಕೊಡಬೇಕಿದೆ.
ಇತ್ತೀಚೆಗೆ ಮಂಗಳೂರಲ್ಲೇ ನವೆಂಬರ್ 22 ರಂದು ಲಾಡ್ಜ್ ರೂಂ ಬೆಡ್ಗೆ ಬೆಂಕಿ ತಗುಲಿ ಯುವಕನೊಬ್ಬ ಜೀವಂತ ದಹನವಾದ ಘಟನೆ ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್ನಲ್ಲಿ ನಡೆದಿತ್ತು
ಇದನ್ನೂ ಓದಿ :ಮಲೆಮಹದೇಶ್ವರ ಬೆಟ್ಟ: 28 ದಿನದಲ್ಲಿ ₹2 ಕೋಟಿಗೂ ಅಧಿಕ ಹಣ ಸಂಗ್ರಹ-ವಿಡಿಯೋ