ಕಂಪನಿಯೊಂದರಲ್ಲಿ ಅಗ್ನಿ ಅವಘಡ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿ - ಈಟಿವಿ ಭಾರತ ಕನ್ನಡ
ಥಾಣೆ (ಮಹಾರಾಷ್ಟ್ರ):ಇಲ್ಲಿಯಕಲ್ಪತರು ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿರುವ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಂಪನಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಕಂಪನಿಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದು ಬಂದಿಲ್ಲ.
ಇತ್ತೇಚೆಗೆ ಪಶ್ಚಿಮ ದೆಹಲಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಬೆಂಕಿಯ ತೀವ್ರತೆಗೆ ಗೋಡಾನ್ನಲ್ಲಿದ್ದ ಅಪಾರ ಪ್ರಮಾಣದ ವಸ್ತಗಳು ಸುಟ್ಟುಕರಕಲಾಗಿದ್ದವು. ಬೆಂಕಿಯನ್ನು ನಂದಿಸಲು ಸುಮಾರು 25 ಅಗ್ನಿಶಾಮಕದ ದಳ ವಾಹನಗಳು ಸ್ಥಳಕ್ಕ ಧಾವಿಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದವು. ದೆಹಲಿಯ ಟಿಕ್ರಿ ಕಲಾನ್ ಪಿವಿಸಿ ಮಾರುಕಟ್ಟೆಯಲ್ಲಿನ ಪ್ಲಾಸ್ಟಿಕ್ ಗೋದಾಮಿಗೆ ಬೆಂಕ ಆವರಿಸಿತ್ತು.
ಇದನ್ನೂ ಓದಿ:ಸಿಲಿಂಡರ್ ಸ್ಪೋಟಗೊಂಡು ಮನೆಗೆ ಬೆಂಕಿ : ನಾಲ್ಕು ಮಕ್ಕಳ ಸಾವು, ನಾಲ್ವರಿಗೆ ಗಂಭೀರ ಗಾಯ
ಇದನ್ನೂ ಓದಿ:ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ : 25 ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ