ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಸರಕು - ಲಾರಿಯಲ್ಲಿದ್ದ ಸರಕು ಬೆಂಕಿಗಾಹುತಿ
ಆನೇಕಲ್( ಬೆಂಗಳೂರು): ಪ್ರತಿ ಬೇಸಿಗೆಯಲ್ಲಿ ಹೆದ್ದಾರಿಗಳಲ್ಲಿ ಕಾರು, ಲಾರಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಬೆಂಕಿ ಇದೀಗ ಬೇಸಿಗೆ ಆರಂಭವಾಗುವ ಮುನ್ನವೇ ವಾಹನ ಸವಾರರನ್ನು ಎಚ್ಚರಿಸಿದೆ. ಬೆಂಗಳೂರು - ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಬಳಿ ಚಲಿಸುತ್ತಿದ್ದ ಸರಕು ತುಂಬಿದ ಲಾರಿಗೆ ಆಕ್ಮಸಿಕ ಬೆಂಕಿ ತಗುಲಿ ಕ್ಷಣ ಮಾತ್ರದಲ್ಲಿ ಲಾರಿಯಲ್ಲಿದ್ದ ಸರಕು ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕೂಡಲೇ ಹತ್ತಿರದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
Last Updated : Feb 3, 2023, 8:36 PM IST