ಪಚ್ಚನಾಡಿ ಡಂಪಿಂಗ್ ಯಾರ್ಡ್ ಕಸದ ರಾಶಿಯಲ್ಲಿ ಬೆಂಕಿ - ಮಂಗಳೂರು ಉತ್ತರ ಶಾಸಕ ಡಾ ವೈ ಭರತ್ ಶೆಟ್ಟಿ
ಮಂಗಳೂರು: ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಕಸದ ರಾಶಿಯಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ತ್ಯಾಜ್ಯದಿಂದ ಮಿಥೇಲ್ ಗ್ಯಾಸ್ ಹೊರಹೊಮ್ಮಿದಾಗ ವಾತಾವರಣದ ಉಷ್ಣತೆಗೆ ಬೆಂಕಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತದೆ. ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಜ್ವಾಲೆ ಇನ್ನಷ್ಟು ಪ್ರದೇಶಕ್ಕೆ ಹಬ್ಬುವುದನ್ನು ತಡೆಯಲು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮಿಸಿದರು. ಸುಮಾರು 10 ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮಿಸಿದರು. ಪಾಲಿಕೆ, ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ ಸುಮಾರು 100 ಮಂದಿ ಬೆಂಕಿ ನಿಯಂತ್ರಣ ಕಾರ್ಯದಲ್ಲಿ ತೊಡಗಿದರು. ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Last Updated : Feb 3, 2023, 8:38 PM IST