ಕೆಟ್ಟುನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಲಾರಿ: ವಾಹನ ಸುಟ್ಟು ಭಸ್ಮ - tumkur lorry accident
ತುಮಕೂರು: ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ಭಸ್ಮವಾಗಿರುವ ಘಟನೆ ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಪುಣೆಯಿಂದ ಬೆಂಗಳೂರಿಗೆ ಮೈದಾ ಹಿಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಬಟವಾಡಿ ಸಮೀಪ ಕೆಟ್ಟುನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಈ ಕುರಿತು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:23 PM IST