ಡ್ರೈವಿಂಗ್ ನಲ್ಲಿರುವಾಗಲೇ ಚಾಲಕನಿಗೆ ಫಿಟ್ಸ್: ಪೆಟ್ರೋಲ್ ಪಂಪ್ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ - fits attack while driver driving lorry
ಬಂಟ್ವಾಳ (ದಕ್ಷಿಣ ಕನ್ನಡ) : ಲಾರಿ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಮೂರ್ಛೆ ರೋಗ (ಫಿಟ್ಸ್) ಬಾಧಿಸಿದ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ನಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಬಿ.ಸಿ ರೋಡ್ನಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಬಿ.ಸಿ ರೋಡಿನ ಪೆಟ್ರೋಲ್ ಪಂಪ್ ಬಳಿ ಈ ಘಟನೆ ನಡೆದಿದೆ. ಲಾರಿ ಚಾಲಕನನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದ್ದು, ಆತನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೆಟ್ರೋಲ್ ಪಂಪ್ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದ ರಿಟ್ಜ್ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ, ಬೈಕ್ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇತರ ವಾಹನಗಳಿಗೂ ಡಿಕ್ಕಿ ಹೊಡೆದ ಲಾರಿ, ಕೊನೆಗೆ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ. ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಅಶ್ವತ್ಥ ನಾರಾಯಣ