ಗುಜರಾತ್ನಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ - ಗುಜರಾತ್ ಮಳೆ ಸುದ್ದಿ
ಗುಜರಾತ್: ಧಾರಾಕಾರ ಮಳೆಯಿಂದಾಗಿ ರಾಜ್ಯದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ವಲ್ಸಾದ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಎನ್‌ಡಿಆರ್‌ಎಫ್ ತಂಡಗಳು ಮತ್ತು ಸ್ಥಳೀಯಾಡಳಿತದ ಸಿಬ್ಬಂದಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಹಠಾತ್ ಪ್ರವಾಹ ಮತ್ತು ನಿರಂತರ ಮಳೆಯಿಂದಾಗಿ ತಾಪಿ ಜಿಲ್ಲೆಯ ಪಾಂಚೋಲ್ ಮತ್ತು ಕುಂಬಿಯಾ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯ ಸೇತುವೆ ಕೊಚ್ಚಿಹೋಗಿದೆ. ನಾಡಿಯಾಡ್, ಖೇಡಾ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಅಹಮದಾಬಾದ್‌ನಲ್ಲೂ ಜೋರು ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ನೀರಿನಲ್ಲಿ ಮುಳುಗಿವೆ.
Last Updated : Feb 3, 2023, 8:24 PM IST