ತುಮಕೂರು : ಶ್ವಾನ, ಜಾನುವಾರುಗಳನ್ನು ಬೇಟೆಯಾಡುತ್ತಿದ್ದ ಚಿರತೆ ಸೆರೆ - ಅರಣ್ಯ ಇಲಾಖೆ ಸಿಬ್ಬಂದಿ
Published : Dec 10, 2023, 6:29 PM IST
ತುಮಕೂರು: ಆಹಾರ ಅರಸಿ ಗ್ರಾಮದಲ್ಲಿರುವ ಶ್ವಾನಗಳನ್ನು ಬೇಟೆಯಾಡಿ ತಿಂದು ಹಾಕುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿರುವ ಘಟನೆ, ತುಮಕೂರು ತಾಲೂಕಿನ ಕಸಬಾ ಹೋಬಳಿ ಊರುಕೆರೆ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅನೇಕ ದಿನಗಳಿಂದ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಹಾಗೂ ಕುರಿ, ಮೇಕೆಗಳನ್ನು ಚಿರತೆಯು ತಿಂದು ಹಾಕುತ್ತಿತ್ತು. ಚಿರತೆಯನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಡ ಹೇರುತ್ತಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು.
ಸಂಜೆಯಾಗುತ್ತಿದ್ದಂತೆ ಊರ ಸಮೀಪವೇ ಎರಡು ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದವು. ಇದರಿಂದಾಗಿ ಜನರು ಭೀತಿಗೊಂಡಿದ್ದರು. ಚಿರತೆ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿ ಗಮನಕ್ಕೆ ತಂದಾಗ, ಅವರು ಚಿರತೆ ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು. ಇದೀಗ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಸಿಕ್ಕಿದೆ. ಇನ್ನೂ ಎರಡು ಚಿರತೆಗಳಿದ್ದು, ಅವುಗಳನ್ನು ಶೀಘ್ರದಲ್ಲೇ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ತುಮಕೂರು: ಬಾಲಕಿಯ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ