ಹಾಸನದಲ್ಲಿ ಹೆಚ್.ಡಿ.ದೇವೇಗೌಡ ದಂಪತಿಯಿಂದ ಮತದಾನ- ವಿಡಿಯೋ - ಹೆಚ್‌ಡಿ ಕುಮಾರಸ್ವಾಮಿ
ಹಾಸನ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತದಾನ ಮಾಡಿದರು. ಹಾಸನದ ಮತಗಟ್ಟೆಯಲ್ಲಿ ಪತ್ನಿ ಚೆನ್ನಮ್ಮ ಅವರ ಸಮೇತರಾಗಿ ಆಗಮಿಸಿದ ಗೌಡರು ತಮ್ಮ ಮತ ಚಲಾಯಿಸಿದರು.
ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಹಾಗು ಪುತ್ರ ಹೆಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ರಾಮನಗರ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಶಾಸಕಿ ಹಾಗು ಪತ್ನಿ ಅನಿತಾ ಕುಮಾರಸ್ವಾಮಿ, ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು. ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆ ಸಂಖ್ಯೆ 235ಯಲ್ಲಿ ಹಕ್ಕು ಚಲಾಯಿಸಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಹಲವು ರಾಜಕಾರಣಿಗಳು, ಇತರ ಕ್ಷೇತ್ರಗಳ ಗಣ್ಯರು ಹಾಗೂ ಸಾಮಾನ್ಯ ನಾಗರಿಕರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ಧಾರೆ. ರಾಜ್ಯಾದ್ಯಂತ ಮಧ್ಯಾಹ್ನ 1 ಗಂಟೆಯವರೆಗೆ ಶೇ.37.25ರಷ್ಟು ಮತದಾನವಾಗಿದೆ.
ಇದನ್ನೂ ಓದಿ: ರಾಮನಗರದಲ್ಲಿ ಕುಮಾರಸ್ವಾಮಿ ಕುಟುಂಬ ಸಮೇತ ಮತದಾನ; ಹಾಸನದ ದೇವಸ್ಥಾನದಲ್ಲಿ ಹೆಚ್ ಡಿ ರೇವಣ್ಣ ಪೂಜೆ ಸಲ್ಲಿಕೆ