ಪಶ್ಚಿಮ ಘಟ್ಟದಲ್ಲಿ ಬೆಂಕಿ ಅವಘಡ: ನಾಲ್ವರು ಅರಣ್ಯ ಸಿಬ್ಬಂದಿಗೆ ಗಾಯ
ಹಾಸನ : ತಾಲ್ಲೂಕಿನ ಕಾಡುಮನೆ ಮಣಿಬೀಡು ದೇವಸ್ಥಾನದ ಸಮೀಪವಿರುವ ಪಶ್ಚಿಮ ಘಟ್ಟದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಹೋದ ಅರಣ್ಯ ಇಲಾಖೆಯ ಮಂಜುನಾಥ್, ಅರಣ್ಯ ರಕ್ಷಕ ಸುಂದರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಣ್ಯ ವೀಕ್ಷಕ ತುಂಗೇಶ್ ಹಾಗೂ ಮಹೇಶ್ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮಧ್ಯಾಹ್ನ ಸುಮಾರು 1.30 ರ ವೇಳೆಗೆ ಘಟನೆ ನಡೆದಿದೆ. ಬೆಂಕಿಯಲ್ಲಿ ಕಾಡಿನ ನಡುವೆ ಸಿಲುಕಿದ ಸಿಬ್ಬಂದಿಯನ್ನು ಗ್ರಾಮಸ್ಥರು ಹಾಗೂ ಇತರ ಇಲಾಖೆ ಸಿಬ್ಬಂದಿ ಸುಮಾರು 12 ಕಿ.ಮೀ ದೂರ ಎತ್ತಿಕೊಂಡು ಬಂದಿದ್ದಾರೆ. ನಂತರ ಆ್ಯಂಬುಲೆನ್ಸ್ ಮುಖಾಂತರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಕರೆತಂದು ಹಾಸನದ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಇದನ್ನೂ ಓದಿ:ರಾಗಿ ಖರೀದಿ ಕೇಂದ್ರದಲ್ಲಿ ಅಗ್ನಿ ಅವಘಡ: 3 ಲಕ್ಷ ರೂ. ಮೌಲ್ಯದ ಬೆಳೆ ಬೆಂಕಿಗಾಹುತಿ