ಆಶ್ಲೇಷ ಮಂಗಳವಾರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ - Etv Bharat Kannada
ದೊಡ್ಡಬಳ್ಳಾಪುರ: ಸರ್ಪನ ನಕ್ಷತ್ರದ ಅಂಗವಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಾಮೂಹಿಕ ಸರ್ಪ ಸಂಸ್ಕಾರ ಸೇವೆ ನಡೆಸಲಾಯಿತು. ಬೆಳಗ್ಗೆ 3 ಗಂಟೆಯಿಂದಲೇ ಭಕ್ತರು ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಸರ್ಪನ ನಕ್ಷತ್ರ ಮೊದಲ ಮಂಗಳವಾರ ಬಂದಿರುವುದು ವಿಶೇಷ ದಿನವಾಗಿದ್ದು, ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನಡೆಸಲಾಯಿತು. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ದೇಶದಲ್ಲಿ ಪ್ರಕೃತಿ ವಿಕೋಪ ಸಂಭವಿಸುತ್ತದೆ, ತಮ್ಮ ಇಷ್ಟ ದೇವರ ಪ್ರಾರ್ಥನೆ ಸಲ್ಲಿಸಿದಲ್ಲಿ ವಿಕೋಪಗಳಿಂದ ಮುಕ್ತಿ ಪಡೆಯಬಹುದು ಎಂದು ಘಾಟಿ ಸುಬ್ರಮಣ್ಯ ಪ್ರಧಾನ ಅರ್ಚಕರಾದ ಸುಬ್ಬುಕೃಷ್ಣಾ ಶಾಸ್ತ್ರಿ ಹೇಳಿದರು.
Last Updated : Feb 3, 2023, 8:35 PM IST