ಪರ್ವತದ ಮೇಲೆ ನಿಂತು ಸೆಲ್ಫಿ.. ಕಾಲುಜಾರಿ 60 ಅಡಿ ಕಂದಕಕ್ಕೆ ಬಿದ್ದ ವಿದ್ಯಾರ್ಥಿನಿ - ಹಿರಣ್ಯ ಪರ್ವತ
Published : Oct 11, 2023, 7:23 AM IST
ನಳಂದಾ(ಬಿಹಾರ) : ವಿದ್ಯಾರ್ಥಿನಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪರ್ವತದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ನಳಂದಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಹಿರಣ್ಯ ಪರ್ವತಕ್ಕೆ ತೆರಳಿದ್ದ ವಿದ್ಯಾರ್ಥಿನಿ ಬೆಟ್ಟದ ಮೇಲಿನ ಕಲ್ಲು ಬಂಡೆಗಳ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿ ಕಾಲು ಜಾರಿ ಸುಮಾರು 60 ಅಡಿ ಕಂದಕಕ್ಕೆ ಬಿದ್ದಿದ್ದಾಳೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ರಕ್ಷಣಾ ದಳದ ಸಿಬ್ಬಂದಿಗಳು ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಳಿಕ ಹಿರಣ್ಯ ಪರ್ವತದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಲ್ಲಿನ ಹಿರಣ್ಯ ಪರ್ವತಕ್ಕೆ ಸಾಕಷ್ಟು ಪ್ರವಾಸಿಗಳು, ವಿದ್ಯಾರ್ಥಿಗಳು ಆಗಮಿಸುತ್ತಾರೆ. ಇಲ್ಲಿನ ಬಂಡೆಗಳ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಮೋಜು ಮಸ್ತಿ ಮಾಡುತ್ತಾರೆ. ಈ ವೇಳೆ ಇಂತಹ ಅವಘಡ ಸಂಭವಿಸುವ ಸಾಧ್ಯತೆ ಇರುತ್ತದೆ. ಈ ಸಂಬಂಧ ಸ್ಥಳದಲ್ಲಿ ಕೆಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ :ಗೋಕರ್ಣ: ಪಿಂಡ ಪ್ರದಾನಕ್ಕೆ ಸಮುದ್ರಕ್ಕೆ ತೆರಳಿದ್ದ ವ್ಯಕ್ತಿ ಸೇರಿ ಒಂದೇ ಕುಟುಂಬದ 7 ಮಂದಿ ರಕ್ಷಣೆ