ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ ರಾಜ್ಯಪಾಲರು : ವಿಡಿಯೋ - ಗಣಪತಿ ಸಚ್ಚಿದಾನಂದ ಆಶ್ರಮ
ಮೈಸೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ನಗರದ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಇಲ್ಲಿನ ಶುಕವನಕ್ಕೆ ಭೇಟಿ ನೀಡಿದ ಅವರು ಗಿಳಿಗಳನ್ನು ವೀಕ್ಷಿಸಿ, ಆಹಾರ ನೀಡಿದರು.
ಇದಕ್ಕೂ ಮೊದಲು ತಮಿಳುನಾಡಿನ ಮಧುಮಲೈಗೆ ತೆರಳಲು ಮೈಸೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪಾಲಿಕೆ ಮೇಯರ್ ಶಿವಕುಮಾರ್, ಪ್ರಾದೇಶಿಕ ಆಯುಕ್ತರಾದ ಪ್ರಕಾಶ್, ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸಿದ ರಾಜ್ಯಪಾಲರು ಶುಕವನವನ್ನು ವೀಕ್ಷಣೆ ಮಾಡಿದರು. ಈ ವೇಳೆ ರಾಜ್ಯಪಾಲರಿಗೆ ಆಶ್ರಮದ ಸಿಬ್ಬಂದಿಗಳು ಹಾಗೂ ಆಡಳಿತಾಧಿಕಾರಿಗಳು ಶುಕವನದ ಬಗ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ :50 ವರ್ಷಗಳ ಬಳಿಕ ಪೊಲೀಸ್ ಸರ್ಪಗಾವಲಿನ ಮಧ್ಯೆ ದೇವಸ್ಥಾನ ಪ್ರವೇಶಿಸಿದ ದಲಿತರು!