ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು: ವಿಡಿಯೋ - Governor Thawar Chand Gehlot
Published : Oct 18, 2023, 1:25 PM IST
ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನವರಾತ್ರಿಯ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ರಾಜ್ಯಪಾಲರ ಜೊತೆಗೆ ಆಗಮಿಸಿದ್ದರು.
ಮೈಸೂರು ವಿವಿ ಘಟಿಕೋತ್ಸವದಲ್ಲಿ ಭಾಗಿ: ಮೈಸೂರು ವಿಶ್ವವಿದ್ಯಾಲಯದ 103 ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಲಿದ್ದು, ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ವಿವಿ ಘಟಿಕೋತ್ಸವದಲ್ಲಿ ನಿವೃತ್ತ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ನಾಡೋಜ ವಿಶ್ರಾಂತ ವೈದ್ಯಕೀಯ ಪ್ರಾಧ್ಯಾಪಕ ಡಾ. ಪಿ ಎಸ್ ಶಂಕರ್ ಹಾಗೂ ಮೈಸೂರು ಸ್ಥಳೀಯ ಪತ್ರಿಕೆಯ ಪ್ರಧಾನ ಸಂಪಾದಕ ಕೆ ಬಿ ಗಣಪತಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು. ಸಂಜೆ ಮೈಸೂರಿನಲ್ಲೇ ಇರುವ ಮತ್ತೊಂದು ಸಂಗೀತ ವಿಶ್ವವಿದ್ಯಾಲಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ 5 ಮತ್ತು 6 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದು, ರಾಜ್ಯಪಾಲರು ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ನೋಡಿ :ನಾಡದೇವತೆ ಚಾಮುಂಡೇಶ್ವರಿಗೆ ನವರಾತ್ರಿಯ 9 ದಿನವೂ 9 ರೀತಿಯ ವಿಶೇಷ ಅಲಂಕಾರ