ಹಾವೇರಿ: ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಮತ್ತೆ ಅಗ್ನಿ ಅವಘಡ - ಈಟಿವಿ ಭಾರತ್ ಕನ್ನಡ ನ್ಯೂಸ್
ಹಾವೇರಿ : ಕಳೆದ ಕೆಲವು ದಿನಗಳ ಹಿಂದೆ ಸ್ಫೋಟ ಸಂಭವಿಸಿದ ರಾಣೆಬೆನ್ನೂರಿನ ಸ್ಪಾರ್ಕ್ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಮತ್ತೆ ಅಗ್ನಿ ಅವಘಡ ಉಂಟಾಗಿದೆ. ಇಂದು ಮುಂಜಾನೆ ಭಾರಿ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಸ್ಫೋಟದ ತೀವ್ರತೆಗೆ ತಗಡಿನ ಮೇಲ್ಚಾವಣಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಘಟಕ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀಕಾಂತ ತಿಮ್ಮಾಪುರ ಎನ್ನುವವರಿಗೆ ಸೇರಿದ ಕಾರ್ಖಾನೆ ಇದಾಗಿದ್ದು, ಈ ಹಿಂದೆ ನಡೆದ ಅನಾಹುತದಲ್ಲಿ ಶಂಭು, ಶಿಲ್ಪಾ ಮತ್ತು ಮಂಗಳಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದ ಶಂಭು ಆ.2 ರಂದು ಬುಧವಾರ ಸಾವನ್ನಪ್ಪಿದ್ದರು. ಶ್ರೀಕಾಂತ ತಿಮ್ಮಾಪುರ ಅವರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಮೃತಪಟ್ಟ ಶಂಭು ಸಂಬಂಧಿಕರು ಆರೋಪಿಸಿದ್ದರು. ಮಾಲೀಕನನ್ನು ಬಂಧಿಸುವಂತೆಯೂ ಆಗ್ರಹಿಸಿದ್ದರು.
ಇದನ್ನೂ ಓದಿ :ಹಾವೇರಿ: ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ.. ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು