'ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ': ಹರಿದ್ವಾರ ಸಂತ ನುಡಿದ ಭವಿಷ್ಯವಾಣಿ - ಹರಿದ್ವಾರದ ಸಂತರ ವಿಡಿಯೋ
ಬೆಂಗಳೂರು: "ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ.ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ" ಎಂದು ಹರಿದ್ವಾರದ ಸಂತರೊಬ್ಬರು ಭವಿಷ್ಯ ನುಡಿದಿದ್ದಾರೆ.
ಹಿಂದೂಗಳ ಧಾರ್ಮಿಕ ಪುಣ್ಯಕ್ಷೇತ್ರ ಉತ್ತರಾಖಂಡದ ಹರಿದ್ವಾರದಲ್ಲಿ ನೆಲೆಸಿರುವ ಈ ಸಂತರು ಮಾತನಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರೇ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ. ಅವರು ಐದು ವರ್ಷಗಳ ಕಾಲ ಅಧಿಕಾರ ನಡೆಸಲಿದ್ದಾರೆ ಅನ್ನೋದು ಸಂತನ ಭವಿಷ್ಯವಾಣಿ. ರಾಜ್ಯದೆಲ್ಲೆಡೆ ಪಂಚರತ್ನ ರಥಯಾತ್ರೆಯ ಮೂಲಕ ಕುಮಾರಸ್ವಾಮಿ ಅಬ್ಬರದ ಚುನಾವಣಾ ಮತಪ್ರಚಾರ ನಡೆಸುತ್ತಿದ್ದಾರೆ. ಈ ಯಾತ್ರೆಗೆ ಎಲ್ಲೆಡೆ ಅಭೂತ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಅವರು ಅನೇಕ ಬಾರಿ ಹೇಳಿದ್ದಾರೆ.
ಇನ್ನು ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದೆ. ಮಾರ್ಚ್ ತಿಂಗಳಾಂತ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮತಬೇಟೆ ನಡೆಸುತ್ತಿವೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಜೆಡಿಎಸ್ ನಾಯಕರು ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಲೋಕಾಯುಕ್ತರ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ