ಚಾಮರಾಜನಗರ: ಪೂರ್ವ ಮುಂಗಾರು ಜೋರು - ರಸ್ತೆಯಲ್ಲಿ ನಿಂತ ನೀರಿನಿಂದ ಪರದಾಡಿದ ವಾಹನ ಸವಾರರು - ಈಟಿವಿ ಭಾರತ್ ಕರ್ನಾಟಕ
ಚಾಮರಾಜನಗರ : ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯ ಕೊನೆ ಹಂತ ಚುರುಕಾಗಿದ್ದು, ಇಂದು ಚಾಮರಾಜನಗರ ಹಾಗೂ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಚಾಮರಾಜನಗರದ ಜೋಡಿ ರಸ್ತೆಯಲ್ಲಿ ಸುಮಾರು 3 ರಿಂದ 4 ಅಡಿ ನೀರು ನಿಂತಿದ್ದರಿಂದ ಒಂದೂವರೆ ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಒಂದೇ ಸಮಯದಲ್ಲಿ ವಾಹನಗಳು ರಸ್ತೆಗಿಳಿದ ಪರಿಣಾಮ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿತ್ತು.
ಮಳೆ ನಿಂತ ಬಳಿಕವೂ ವಾಹನ ಸವಾರರು ನೀರಿನಲ್ಲಿ ಸಿಲುಕಿ ಹಲವರು ಬಿದ್ದು ಪೆಟ್ಟು ಮಾಡಿಕೊಂಡಿದ್ದ ಘಟನೆಯೂ ನಡೆಯಿತು. ಇಂದು ಸುರಿದ ಭಾರಿ ಮಳೆಯಿಂದಾಗಿ ರಸ್ತೆಯ ಒಂದು ಭಾಗದಲ್ಲಿ ನಿಲ್ಲಿಸಿದ್ದ ವಾಹನಗಳು ಮುಳುಗಡೆಯಾದರೇ ಮತ್ತೊದೆಡೆ ಹಲವು ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಇನ್ನು 3 ದಿನ ಮಳೆ ಆಗುವ ಸಂಭವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ :ವಿದ್ಯುತ್ ತಂತಿ ಹರಿದು ಬಿದ್ದು 11 ಜಾನುವಾರುಗಳ ದುರ್ಮರಣ - ವಿಡಿಯೋ