ಕರ್ನಾಟಕ

karnataka

ಭಾರಿ ಮಳೆ : ನಂಜನಗೂಡಿನಲ್ಲಿ ಸ್ನಾನಘಟ್ಟ ಮುಳುಗಡೆ.. ಡ್ರೋನ್​​ನಲ್ಲಿ ಸೆರೆಯಾದ ಕಬಿನಿ ವಿಹಂಗಮ ನೋಟ

ETV Bharat / videos

ನಂಜನಗೂಡಿನಲ್ಲಿ ಸ್ನಾನಘಟ್ಟ ಮುಳುಗಡೆ; ಡ್ರೋನ್​​ ಕಣ್ಣಿನಲ್ಲಿ ಕಬಿನಿ ಜಲಾಶಯದ ದೃಶ್ಯ- ವಿಡಿಯೋ - heavy Rain in mysore

By

Published : Jul 27, 2023, 12:18 PM IST

Updated : Jul 27, 2023, 3:15 PM IST

ಮೈಸೂರು:‌ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನಂಜನಗೂಡಿನ ಕಪಿಲಾ ನದಿಯ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಿದೆ. ನೀರಿಗೆ ಇಳಿಯದಂತೆ ಭಕ್ತಾದಿಗಳಿಗೆ ದೇವಸ್ಥಾನ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು ಕಬಿನಿ ಜಲಾಶಯ ತುಂಬಿದೆ. ಸದ್ಯ 24,901 ಕ್ಯೂಸೆಕ್‌ ಒಳಹರಿವು ಇದೆ. ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಹೆಚ್.ಡಿ.ಕೋಟೆಯ ಬಿದರಹಳ್ಳಿ ಸೇತುವೆ ಮುಳುಗಡೆಯಾಗಿದೆ. ನಂಜನಗೂಡಿನಲ್ಲಿ ಕಪಿಲಾ ನದಿ ಮಂಟಪ, ಸ್ನಾನಘಟ್ಟದ ಮೆಟ್ಟಿಲು ಜಲಾವೃತವಾಗಿದೆ. ಹೆಜ್ಜಿಗೆ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ. ಕಬಿನಿಯು ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯವಾಗಿದೆ. ಜಲಾಶಯದಿಂದ ಬಿಡುಗಡೆಯಾದ ನೀರು ಧುಮ್ಮುಕ್ಕಿ ಹರಿಯುತ್ತಿರುವ ದೃಶ್ಯವನ್ನು ಡ್ರೋನ್​ ಕ್ಯಾಮರಾದ ಮೂಲಕ ಸೆರೆ ಹಿಡಿಯಲಾಗಿದೆ. 

ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿ ಪಾತ್ರದ ಜನರಿಗೆ ಮನವಿ:ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ ಕಪಿಲಾ ನದಿಗೆ ಹೆಚ್ಚಿನ ನೀರು ಹೊರ ಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರಪತ್ರ ಹಂಚಿ ಮನವಿ ಮಾಡಲಾಗುತ್ತಿದೆ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಶೇಖರ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.

ಬಾಗೀನ ಅರ್ಪಿಸಲು ಸಿದ್ದತೆ:ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಅವರನ್ನು ಆಹ್ವಾನಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರವೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡುವುದಾಗಿ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ಶಿವಮೊಗ್ಗ: ತುಂಬಿ ಹರಿಯುತ್ತಿದ್ದ ನದಿಗೆ ಹಾರಿ ಯುವಕನ ಹುಚ್ಚಾಟ; ಬಿಸಿ ಮುಟ್ಟಿಸಿದ ಪೊಲೀಸರು

Last Updated : Jul 27, 2023, 3:15 PM IST

ABOUT THE AUTHOR

...view details