ಮುಳಬಾಗಿಲು ಗಡಿಯಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ - elephant from Kaigal forest area
ಕೋಲಾರ : ಮುಳಬಾಗಿಲು ತಾಲೂಕಿನ ಗಡಿ ಭಾಗದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಅಲ್ಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕರವಿರೆಡ್ಡಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ಸುಮಾರು 14 ಕಾಡಾನೆಗಳು ಆಹಾರ ಅರಸಿ ನಾಡಿನ ಕಡೆ ಬಂದಿವೆ. ಆಂಧ್ರಪ್ರದೇಶದ ಗಡಿಯಲ್ಲಿರುವ ಕೈಗಲ್ ಅರಣ್ಯ ಪ್ರದೇಶದಿಂದ ಬಂದಿರುವ ಆನೆ ಹಿಂಡು ರೈತರ ಹತ್ತಾರು ಎಕರೆ ಬೆಳೆ ನಾಶ ಮಾಡಿವೆ.
ಇನ್ನು ಕಾಡಾನೆಗಳು ಪ್ರತ್ಯಕ್ಷವಾದ ಹಿನ್ನೆಲೆ ಗಜಪಡೆಯನ್ನು ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಮುಳಬಾಗಿಲು ಗ್ರಾಮಾಂತರ ಪೊಲೀಸರ ದೌಡಾಯಿಸಿದ್ದು, ಆನೆ ಹಿಂಡು ಹಿಮ್ಮೆಟ್ಟಿಸುವ ಕಾರ್ಯಾಚರಣೆಯನ್ನು ಅರಣ್ಯಾಧಿಕಾರಿಗಳು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಆನೆಗಳನ್ನು ನೋಡಲು ಸ್ಥಳಕ್ಕೆ ನೂರಾರು ಜನರು ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಮುಳಬಾಗಲು ಗ್ರಾಮಾಂತರ ಠಾಣಾ ಪೊಲೀಸರು ಹರಸಾಹಸ ಪಟ್ಟರು.
ಈ ವೇಳೆ ಗ್ರಾಮಸ್ಥರಾದ ಗೋಪಿನಾಥ್ ಅವರು ಮಾತನಾಡಿ, ಕಾಡಾನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿದೆ. ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದ್ದ ತಕ್ಷಣ ಬಂದು ಕಾರ್ಯಾಚರಣೆ ಕೈಗೊಂಡಿದ್ದಾರೆ. ಅದಷ್ಟು ಬೇಗ ಕಾಡಾನೆಗಳನ್ನು ಕಾಡಿಗೆ ಕಳುಹಿಸಿ ಜನರ ರಕ್ಷಣೆ ಮಾಡುವ ಕೆಲಸವಾಗಬೇಕು. ಹಾಗು ನಾಶವಾಗಿರುವ ಬೆಳೆಗಳನ್ನು ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ಆಹಾರ ಅರಸಿ ನಾಡಿಗೆ ಬಂದು ಗುಂಡೇಟಿಗೆ ಬಲಿಯಾದ 10 ತಿಂಗಳ ಗರ್ಭಿಣಿ ಕಾಡಾನೆ!