ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - ಬೆಂಗಳೂರು
ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್ ಸರಣಿ ಅಪಘಾತ ಪ್ರಕರಣಗಳು ಮುಂದುವರೆದಿವೆ. ಜ್ಞಾನ ಭಾರತಿ, ಪೀಣ್ಯಾದಲ್ಲಿ ನಡೆದ ಭೀಕರ ಅಪಘಾತಗಳು ಮಾಸುವ ಮುನ್ನವೇ ಫೆ.1ರಂದು ಕೆಆರ್ಪುರಂನ ಟಿ.ಸಿ ಪಾಳ್ಯ ಮುಖ್ಯರಸ್ತೆಯಲ್ಲಿ ಮತ್ತೊಂದು ದುರಂತ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಅತೀ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬಂದ ವ್ಯಕ್ತಿ ಎದುರು ಬರುತ್ತಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸುಮಾ ಹಾಗೂ ಚೇತನ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೋರ್ವ ಯುವಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ.
ಅಪಘಾತದ ಭೀಕರ ದೃಶ್ಯಾವಳಿಗಳು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಸದ್ಯ ಗಾಯಾಳುಗಳನ್ನ ಕೆಆರ್ ಪುರಂನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಆರ್ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್: ತಂದೆಯನ್ನು ಭೇಟಿಯಾಗಲು ಹೊರಟಿದ್ದವ ಅಪಘಾತಕ್ಕೆ ಬಲಿ