ಕರ್ನಾಟಕ

karnataka

ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ರೋಡ್ ಶೋ ನಡೆಸಿದರು.

ETV Bharat / videos

ಬೃಹತ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ - ಕೇಸರಿ ಧ್ವಜ

By

Published : Apr 20, 2023, 5:33 PM IST

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರಿಂದು ನಗರದಲ್ಲಿ ಬೃಹತ್ ರೋಡ್  ಶೋ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದರು. ನಗರದ ನಾಗಶೆಟ್ಟಿಕೊಪ್ಪದ ಹನುಮಂತ ದೇವಸ್ಥಾನದಿಂದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು ಬೃಹತ್ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಮೆರವಣಿಗೆಯಲ್ಲಿ ಕೇಸರಿ ಧ್ವಜಗಳು ರಾರಾಜಿಸಿದವು. ಬಿಜೆಪಿ ಮುಖಂಡರ ಪರ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದರು. ಜನಪದ ವಿವಿಧ ಕಲಾ ಪ್ರಕಾರಗಳು ಜನರ ಮನಸೂರೆಗೊಳಿಸಿದವು. 

ಬೃಹತ್ ರೋಡ್ ಶೋ ವೇಳೆ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಪ್ರಮುಖ ಮುಖಂಡರು ಸಾಥ್ ನೀಡಿದರು. ಶೋ ವೇಳೆ ಅಪಾರ ಜನರು ಸೇರಿದ್ದರು. ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ.

ಇದನ್ನೂಓದಿ:ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ ದೇವರಲ್ಲ: ಸಿದ್ದರಾಮಯ್ಯ

ABOUT THE AUTHOR

...view details