ಕಾಂಗ್ರೆಸ್ ಸರ್ಕಾರ ಬಂದ ಹಿನ್ನೆಲೆ : ಇಂದಿರಾ ಕ್ಯಾಂಟಿನ್ನಲ್ಲಿ ಹೋಳಿಗೆ ಊಟ ಹಾಕಿ ಸಂಭ್ರಮಾಚರಣೆ - ಇಂದಿರಾ ಕ್ಯಾಂಟಿನ್ ನಲ್ಲಿ ಹೋಳಿಗೆ ಊಟ
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆದು ಸರ್ಕಾರದ ರಚನೆ ಮಾಡುತ್ತಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ, ಡಿ ಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಆಗಿ ಆಯ್ಕೆಯಾದ ಹಿನ್ನೆಲೆ ಮೈಸೂರಿನ ಕಾಡಾ ಕಚೇರಿಯ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ನಲ್ಲಿ ಸಿದ್ದರಾಮಯ್ಯ ಹಾಗೂ ಡಿ ಕೆ ಬೆಂಬಲಿಗರು, ಇಂದಿರಾ ಕ್ಯಾಂಟಿನ್ ಗ್ರಾಹಕರಿಗೆ ಹೋಳಿಗೆ ಊಟ ಹಾಕಿಸಿ, ಸಂಭ್ರಮಾಚರಣೆ ಆಚರಿಸಿದರು.
ನಾಳೆ ಶನಿವಾರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಆಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ಮೈಸೂರಿನ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅಭಿಮಾನಿಗಳು ಮುಚ್ಚುವ ಹಂತದಲ್ಲಿದ್ದ ಇಂದಿರಾ ಕ್ಯಾಂಟಿನ್ಗೆ ಆಗಮಿಸಿ. ಅಲ್ಲಿ ಬರುವ ಗ್ರಾಹಕರಿಗೆ ಹೋಳಿಗೆ ಊಟ ಹಾಕಿಸಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತ ಬಸಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ. ಆದರೆ, ಇಂದಿರಾ ಕ್ಯಾಂಟಿನ್ ಕಳಪೆ ಆಹಾರ ನೀಡುತ್ತಿರುವ ಹಿನ್ನೆಲೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟಿನ್ನಲ್ಲಿ ಗುಣಮಟ್ಟದ ಊಟವನ್ನು ನೀಡಲು ಆರಂಭಿಸಬೇಕೆಂದು, ಸಿದ್ದರಾಮಯ್ಯನವರಲ್ಲಿ ಮನವಿ ಮಾಡುತ್ತೇನೆ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಆಗಿ ಡಿ ಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುತ್ತಿರುವ ಹಿನ್ನೆಲೆ ಇಂದು ಇಂದಿರಾ ಕ್ಯಾಂಟಿನ್ ನಲ್ಲಿ ಹೋಳಿಗೆ ಊಟ ನೀಡಲಾಯಿತು ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ: ಡಿಕೆಶಿ