ಹೊಸಕೋಟೆ: ಬೈಕ್ಗಳಿಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದ ಕಾರು.. ಸಿಸಿಟಿವಿ ವಿಡಿಯೋ - Kammasandra Village of Hoskote Taluk
ಹೊಸಕೋಟೆ (ಬೆಂಗಳೂರು ಗ್ರಾಮಾಂತರ):ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
ದೇವನಹಳ್ಳಿಯ ರಾಜೇಶ್ ಎಂಬುವರು ಹೊಸಕೋಟೆಯ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಕಾರು ನೋಡ ನೋಡುತ್ತಿದ್ದಂತೆ ರಸ್ತೆ ಪಕ್ಕದಲ್ಲಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರು ಅಪಘಾತದ ದೃಶ್ಯವು ಪಕ್ಕದಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:Raichur Accident Video: ಬೈಕ್ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು.. ಅಪಘಾತದ ದೃಶ್ಯ ವೈರಲ್
ಅತಿವೇಗದಿಂದ ಬಂದ ಕಾರು ರಸ್ತೆ ಪಕ್ಕದ ಬೈಕ್ಗಳಿಗೆ ರಭಸವಾಗಿ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಏರ್ ಬ್ಯಾಗ್ನಿಂದಾಗಿ ಅಪಾಯದಿಂದ ಬಚಾವ್ ಆಗಿದ್ದಾರೆ. ಅಪಘಾತದಲ್ಲಿ ಕಾರು ಹಾಗೂ ಎರಡು ಬೈಕ್ಗಳು ಜಖಂ ಆಗಿವೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮಧುರೈನ ಮಸ್ತಾನಪಟ್ಟಿ ಟೋಲ್ಗೆ ಟ್ರಕ್ ಡಿಕ್ಕಿ-ಸಿಬ್ಬಂದಿ ಸಾವು: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ