ಕುಸಿದು ಬಿದ್ದ ಮನೆ, ಬಾಲಕಿ ಪ್ರಾಣಾಪಾಯದಿಂದ ಪಾರು.. ಉಪ್ಪಾರ ಬಡಾವಣೆಗೆ ಶಾಸಕ, ಡಿಸಿ ಭೇಟಿ! - ನಿರಂತರ ಮಳೆಯಿಂದಾಗಿ ಮನೆ ಕುಸಿತ
ಮೈಸೂರು: ಬಾಲಕಿ ಮೇಲೆ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಹೋಬಳಿಯ ಕಾರ್ಯ ಗ್ರಾಮದಲ್ಲಿ ನಡೆದಿದೆ. ನಾರಾಯಣ್ ಎಂಬುವರ ಪುತ್ರಿ ನಗುತಾ (6) ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆದ್ರೆ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಕೂಡಲೇ ಬಾಲಕಿಯನ್ನು ತಗಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣೆಯಾದ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಎಡಬಿಡದೆ ಸುರಿಯುತ್ತಿರುವ ಗುಡುಗು ಸಹಿತ ಭಾರೀ ಮಳೆಗೆ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಉಪ್ಪಾರ ಬಡಾವಣೆ ಸಂಪೂರ್ಣ ಜಲಾವೃತವಾಗಿದೆ. ಈ ಬಡಾವಣೆ ನೋಡಲು ಶಾಸಕ ಹರ್ಷವರ್ಧನ್, ಡಿಸಿ ಡಾ. ಬಗಾದಿ ಗೌತಮ್ ಸಂಕದ ಮೂಲಕ ತೆರಳಿದರು. ನಿವಾಸಿಗಳನ್ನು ಸ್ಥಳಾಂತರ ಮಾಡಿ ಗಂಜಿ ಕೇಂದ್ರದಲ್ಲಿ ತಾತ್ಕಾಲಿಕವಾಗಿ ತಿಂಡಿ, ಊಟ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಮನೆಗೂ 10 ಸಾವಿರ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕರು ಹೇಳಿದರು. ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿ, ಧೈರ್ಯ ತುಂಬಿದರು.
Last Updated : Feb 3, 2023, 8:27 PM IST