ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ ಬಿಜೆಪಿ ರಾಜಕೀಯ ಗಿಮಿಕ್: ಪ್ರಸಾದ್ ಅಬ್ಬಯ್ಯ
ಬೆಂಗಳೂರು:ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ರಾಜಕೀಯ ಗಿಮಿಕ್ ನಡೆಸುತ್ತಿದೆ ಎಂದರು. ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಜನತೆ ಯಾರೂ ಕೂಡ ವಿವಾದ ಬಯಸಲ್ಲ. ಆದರೆ, ಮತ ವಿಭಜನೆ ಮಾಡಿ, ಜಾತಿ ಹೆಸರಿನಲ್ಲಿ ಮತ ಪಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಬಂದಿದ್ದು ಈದ್ಗಾ ವಿವಾದದ ಮೂಲಕವೇ. ನಾವು ಅಭಿವೃದ್ಧಿ ವಿಚಾರವಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಹುಬ್ಬಳ್ಳಿ-ಧಾರವಾಡ ಜನರು ಶಾಂತಿಯಿಂದ ಬದುಕುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ವಿಷಬೀಜ ಬಿತ್ತುವ ಕೆಲಸ ಸರ್ಕಾರ ಮಾಡಬಾರದು. ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬೇಕು. ಚುನಾವಣೆ ಬರುವಾಗ ಇಂತಹ ವಿಚಾರ ಮುನ್ನಲೆಗೆ ಬರುತ್ತವೆ ಎಂದು ಹೇಳಿದರು.
ಇದನ್ನೂ ನೋಡಿ:ಮುಂದುವರಿದ ಪಂಚರತ್ನ ಯಾತ್ರೆ: ತರಕಾರಿ, ಅಡಕೆ ಹಾರ ಹಾಕಿ ಹೆಚ್ಡಿಕೆ ಬರಮಾಡಿಕೊಂಡ ಜನ