ಚಂದ್ರ ಗ್ರಹಣ: ಬೆಳಗ್ಗೆಯೇ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದ ಲಕ್ಷಾಂತರ ಭಕ್ತರು - Huligemma Devi Temple
ಕೊಪ್ಪಳ: ಇಂದು ಚಂದ್ರ ಗ್ರಹಣ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬಂದ್ ಆಗಲಿದೆ. ದೇವಸ್ಥಾನ ಬಂದ್ ಪ್ರಕಟಣೆ ಕೇಳಿದ ಲಕ್ಷಾಂತರ ಭಕ್ತರು ಬೆಳಗ್ಗೆಯೇ ದೇವಿ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ. ಸಾಮಾನ್ಯವಾಗಿ ಹುಣ್ಣಿಮೆ ಹಾಗೂ ಮಂಗಳವಾರ ಹುಲಿಗೆಮ್ಮ ದೇವಿ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ಮಂಗಳವಾರ ಹಾಗೂ ಗೌರಿ ಹುಣ್ಣಿಮೆ ಒಟ್ಟಿಗೆ ಬಂದಿರುವ ಹಿನ್ನೆಲೆ ಲಕ್ಷಾಂತರ ಜನರು ದೇವಾಲಯಕ್ಕೆ ಆಗಮಿಸಿದ್ದಾರೆ.
Last Updated : Feb 3, 2023, 8:31 PM IST