ಉಘೇ ಮಾದಪ್ಪ ಈಗ ಇನ್ನಷ್ಟು ಶ್ರೀಮಂತ.. ಮಹದೇಶ್ವರನಿಗೆ ಹರಿದುಬಂತು ಕೋಟಿ ಕೋಟಿ ಹಣ
ಚಾಮರಾಜನಗರ:ಜಿಲ್ಲೆಯ ಪ್ರಮಖ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ಹುಂಡಿಗಳ ಎಣಿಕೆ ಕಾರ್ಯಕ್ರಮ ನಡೆಯಿತು. ಈ ವೇಳೆ ಹುಂಡಿಗಳಲ್ಲಿ 2.86 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಹುಂಡಿ ಎಣಿಕೆ ಕಾರ್ಯ ರಾತ್ರಿ 10.30 ಗಂಟೆಯವರೆಗೂ ನಡೆಯಿತು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಸಿಬ್ಬಂದಿ ಭಾಗವಹಿಸಿದ್ದರು. ಈ ಬಾರಿ ಅಮಾವಾಸ್ಯೆ, ಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಆಗಮಿಸಿದ್ದರಿಂದ 26 ದಿನಗಳ ಅವಧಿಯಲ್ಲಿ 2,86,17,698 ರೂಪಾಯಿ ಹಣ ಹಾಗೂ 90 ಗ್ರಾಂ ಚಿನ್ನ ಹಾಗೂ 2.825 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಇದನ್ನೂ ನೋಡಿ:ಬರ್ಮುಡಾ ಧರಿಸಿ ರೇಣುಕಾಚಾರ್ಯ ಜಯಂತಿ ಆಚರಣೆ: ಸ್ವಾಮೀಜಿ ಕಾಲಿಗೆ ಬಿದ್ದ ಕಲಘಟಗಿ ತಹಶೀಲ್ದಾರ್