ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ: 85 ಲಕ್ಷ ರೂ ಸಂಗ್ರಹ - ಈಟಿವಿ ಭಾರತ ಕನ್ನಡ
ದೊಡ್ಡಬಳ್ಳಾಪುರ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು. ಸುಮಾರು 85,23,744 ರೂಪಾಯಿ ಹಣ ಸಂಗ್ರಹವಾಗಿದೆ. ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬ್ರಹ್ಮರಥೋತ್ಸವ ಹಾಗೂ ಹೊಸ ವರ್ಷದ ಹಿನ್ನೆಲೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಹುಂಡಿ ಎಣಿಕೆಯಲ್ಲಿ ಸುಮಾರು 85.23 ಲಕ್ಷ ನಗದು, 11.900 ಗ್ರಾಂ ಚಿನ್ನ, 5.50 ಗ್ರಾಂ ಬೆಳ್ಳಿ ಸಂಗ್ರಹ ಆಗಿದೆ. ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣಶಾಸ್ತ್ರಿ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
Last Updated : Feb 3, 2023, 8:38 PM IST