'ಸ್ಯಾಮ್ ಬಹದ್ದೂರ್' ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭೂಸೇನಾ ಮುಖ್ಯಸ್ಥ ಜ.ಮನೋಜ್ ಪಾಂಡೆ ಭಾಗಿ- ವಿಡಿಯೋ - ಸನ್ಯಾ ಮಲ್ಹೋತ್ರಾ
Published : Nov 8, 2023, 10:53 AM IST
ನವದೆಹಲಿ:ಭಾರತೀಯ ಭೂಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಮಂಗಳವಾರ ದೆಹಲಿಯಲ್ಲಿ ನಡೆದ ನಟ ವಿಕ್ಕಿ ಕೌಶಲ್ ಅಭಿನಯದ 'ಸ್ಯಾಮ್ ಬಹದ್ದೂರ್' (Sam Bahadur) ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೇಘನಾ ಗುಲ್ಜಾರ್ ನಿರ್ದೇಶನದ ಈ ಚಿತ್ರದಲ್ಲಿ ವಿಕ್ಕಿ ಕೌಶಲ್, ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
1971ರ ಇಂಡೋ ಪಾಕ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಹಾಗೂ ರಾಷ್ಟ್ರಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟ ಸ್ಯಾಮ್ ಮಾಣೆಕ್ ಶಾ ಜೀವನವನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡಲಾಗಿದ್ದು, ಸನ್ಯಾ ಮಲ್ಹೋತ್ರಾ ಅವರು ವಿಕ್ಕಿ ಕೌಶಲ್ ಪತ್ನಿಯಾಗಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 1ರಂದು ವಿಶ್ವದ್ಯಾಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವಿಕ್ಕಿ ಕೌಶಲ್ ಅವರು ಚಲನಚಿತ್ರದಲ್ಲಿ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಶಾ ಪಾತ್ರದಲ್ಲಿ ಎದುರಿಸಿದ ಮಹತ್ವದ ಸವಾಲುಗಳ ಕುರಿತು ಚರ್ಚಿಸಿದರು.
ಇದನ್ನೂ ಓದಿ:ಇಂದು 'ಸ್ಯಾಮ್ ಬಹದ್ದೂರ್' ಟ್ರೇಲರ್ ಬಿಡುಗಡೆ; ದೆಹಲಿಯಲ್ಲಿ ಚಿತ್ರತಂಡ