ನಿರ್ಮಾಣ ಹಂತದಲ್ಲಿರುವ ಅಯೋಧ್ಯೆಯ ಶ್ರೀರಾಮಮಂದಿರ ಹೇಗಿದೆ ಗೊತ್ತೇ?: ವಿಡಿಯೋ ನೋಡಿ.. - Etv Bharat Kannada News
ಅಯೋಧ್ಯೆ: ಧಾರ್ಮಿಕ ನಗರಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮುಂದಿನ ವರ್ಷ ಜನವರಿ ತಿಂಗಳಲ್ಲಿ ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ. 2024ರ ಜನವರಿ 14ರಿಂದ 27ರ ನಡುವೆ ರಾಮಲಲ್ಲಾನ ಪ್ರತಿಷ್ಠಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋಗಳನ್ನು ರಾಮಮಂದಿರ ಟ್ರಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ದೇವಾಲಯದ ಇತ್ತೀಚಿನ ನಿರ್ಮಾಣ ಕಾರ್ಯದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಿಡಿಯೋದಲ್ಲಿ ರಾಮಮಂದಿರದ ಗರ್ಭಗುಡಿಯ ಸುತ್ತಲಿನ ಕೆತ್ತನೆಗಳನ್ನು ತೋರಿಸಲಾಗಿದೆ. ಇಲ್ಲಿನ ಶಿಲ್ಪಕಲೆಗಳು, ಕೆತ್ತನೆಗಳು ಅದ್ಭುತವಾಗಿ ಮೂಡಿಬಂದಿದ್ದು, ನೋಡುಗರನ್ನು ಬೇರೆ ಲೋಕಕ್ಕೆ ಕರೆದೊಯ್ಯುವಂತೆ ಭಾಸವಾಗುತ್ತದೆ. ರಾಮಮಂದಿರದ ಕೆಲ ಅಂತಸ್ತಿನ ನಿರ್ಮಾಣ ಕಾರ್ಯ ಶೇ. 90ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾರ್ಯಗಳು ಭರದಿಂದ ಸಾಗುತ್ತಿದೆ. ಸದ್ಯ ದೇವಾಲಯದ ಛಾವಣಿ ಮತ್ತು ಬಾಗಿಲುಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ದಿನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ನಿರ್ಮಾಣ ಕಾರ್ಯ ಹೆಚ್ಚಿನ ವೇಗ ಪಡೆದುಕೊಂಡಿದೆ.
ಇದನ್ನೂ ಓದಿ :2024ಕ್ಕೆ ಅಯೋಧ್ಯೆದಲ್ಲಿ ರಾಮಮಂದಿರ ನಿರ್ಮಾಣ ಪೂರ್ಣ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ