ಶರದ್ ಪವಾರ್ ಆಪ್ತ ಉದ್ಯಮಿ ಅನಿರುದ್ ದೇಶಪಾಂಡೆ ಕಚೇರಿ ಮೇಲೆ ಐಟಿ ದಾಳಿ.. - ಶರದ್ ಪವಾರ್ ಅವರ ಆಪ್ತ
ಪುಣೆ (ಮಹಾರಾಷ್ಟ್ರ) :ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷಶರದ್ ಪವಾರ್ ಅವರ ಆಪ್ತ ಹಾಗೂ ಖ್ಯಾತ ಉದ್ಯಮಿಯಾಗಿರುವ ಅನಿರುದ್ಧ ದೇಶಪಾಂಡೆ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಟಿಗ್ರೂಪನ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಮನೋರಾ ಟೌನ್‌ಶಿಪ್‌ನ ಪ್ರವರ್ತಕರಾಗಿರುವ ಅನಿರುದ್ಧ ಅವರಿಗೆ ಸೇರಿದ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಇಂದು ಸುಮಾರು 14 ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ಒಟ್ಟು 8 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಅದರಲ್ಲಿ ಶರದ್ ಪವಾರ್ ಅವರ ಆಪ್ತರಾಗಿರುವ ಅನಿರುದ್ಧ ಅವರ ಕಚೇರಿಯು ಒಳಗೊಂಡಿದೆ ಎಂದು ತಿಳಿದು ಬಂದಿದೆ. ಕಂಪನಿಯ ಹಣಕಾಸು ವ್ಯವಹಾರ ಮತ್ತು ತೆರಿಗೆ ವಂಚನೆ ಕುರಿತು ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇನ್ನು ಅನಿರುದ್ಧ ರಾಜಕೀಯ ನಾಯಕರೊಂದಿಗೂ ಗುರುತಿಸಿಕೊಂಡಿದ್ದಾರೆ. ಈ ದಾಳಿ ಪುಣೆಯ ಉದ್ಯಮ ಕ್ಷೇತ್ರದಲ್ಲಿ ಬಾರಿ ಸಂಚಲನ ಸೃಷ್ಟಿಸಿದೆ.
ಇದನ್ನೂ ಓದಿ:ದೆಹಲಿ, ಮುಂಬೈ ಕಚೇರಿಗಳ ಮೇಲೆ ಐಟಿ ದಾಳಿ: ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ ಎಂದ ಬಿಬಿಸಿ