ಸಿದ್ದೇಶ್ವರ ಶ್ರೀಗಳ ಆರೋಗ್ಯ ಚೇತರಿಕೆಗೆ ಹುಕ್ಕೇರಿ ಹಿರೇಮಠದಲ್ಲಿ ಜಯಮೃತ್ಯುಂಜಯ ಹೋಮ - jnanayogashrama
ಚಿಕ್ಕೋಡಿ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಶೀಘ್ರ ಚೇತರಿಸಿಕೊಳ್ಳಲೆಂದು ಹುಕ್ಕೇರಿ ಹಿರೇಮಠದಲ್ಲಿ ಜಯಮೃತ್ಯುಂಜಯ ಹೋಮ ಹವನ ನೆರವೇರಿಸಲಾಯಿತು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ಜಯಮೃತ್ಯುಂಜಯ ಹೋಮ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಹುಕ್ಕೇರಿ ಶ್ರೀಗಳು ಮಾತನಾಡಿ, ಕೆಲವರು ಶ್ರೀಗಳ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ನಾವು ಕೂಡ ಶ್ರೀಗಳನ್ನು ಭೇಟಿ ಮಾಡಿ ಬಂದಿದ್ದೇವೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಿ ಮತ್ತು ಶತಾಯುಷಿ ಆಗಲೆಂದು ದೇವರಲ್ಲಿ ಪ್ರಾರ್ಥಿಸಿಸೋಣ ಎಂದರು.
Last Updated : Feb 3, 2023, 8:38 PM IST