ಕರ್ನಾಟಕ

karnataka

ಶ್ರೀ ಸಿದ್ದಾರೂಢಸ್ವಾಮಿ ಮಠ

ETV Bharat / videos

ಶ್ರೀ ಸಿದ್ದಾರೂಢಸ್ವಾಮಿ ಮಠಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ ಪಡೆದ ಜೆ.ಪಿ.ನಡ್ಡಾ - ETV Bharat kannada News

By

Published : Apr 19, 2023, 9:20 PM IST

ಹುಬ್ಬಳ್ಳಿ :ಶ್ರೀ ಸಿದ್ದಾರೂಢಸ್ವಾಮಿ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದು ಭೇಟಿ ನೀಡಿ ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಉತ್ತರ ಕರ್ನಾಟಕದ ಪ್ರಸಿದ್ದ ಮೂರು ಸಾವಿರ ಮಠಕ್ಕೆ ತೆರಳಿದ ಅವರು ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಮೂರು ಸಾವಿರ ಮಠದ ಸ್ವಾಮೀಜಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರಿಗೆ ಸಾಥ್ ​ನೀಡಲು ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಿದರು. ಸಿಎಂ ಬೊಮ್ಮಾಯಿ ತಮ್ಮ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ತೆರೆದ ವಾಹನ ಮೂಲಕ ಭರ್ಜರಿ ರೋಡ್​ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಈ ವೇಳೆ ಜೆ.ಪಿ.ನಡ್ಡಾ ಮತ್ತು ನಟ ಕಿಚ್ಚ ಸುದೀಪ್, ಶಾಸಕ ಅರವಿಂದ ಬೆಲ್ಲದ, ಲಿಂಗರಾಜ ಪಾಟೀಲ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.      

ಇದನ್ನೂ ಓದಿ :ವಿರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಮನ್ಸೂರ್​ ಅಲಿ ನಾಮಪತ್ರ ಸಲ್ಲಿಕೆ

ABOUT THE AUTHOR

...view details