ಚಾಲಕನ ನಿಯಂತ್ರಣ ತಪ್ಪಿ ಮಹಿಂದ್ರಾ ಪಿಕಪ್ ವಾಹನ ಪಲ್ಟಿ: 15 ಶಾಲಾ ವಿದ್ಯಾರ್ಥಿಗಳಿಗೆ ಗಾಯ - ಈಟಿವಿ ಭಾರತ ಕನ್ನಡ
ಕಲಬುರಗಿ : ಚಾಲಕನ ನಿಯಂತ್ರಣ ತಪ್ಪಿ ಮಹಿಂದ್ರಾ ಪಿಕ್ಅಪ್ ವಾಹನ ಪಲ್ಟಿಯಾಗಿ ಸುಮಾರು 15 ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಬಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಪಿಕಪ್ ವಾಹನದಲ್ಲಿ ಮಹಾಗಾಂವದಿಂದ ಮಡಕಿ ತಾಂಡಾಕ್ಕೆ ತೆರಳುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ತಾಂಡಾಕ್ಕೆ ಸಾರಿಗೆ ಬಸ್ಗಳ ಕೊರತೆ ಇದ್ದು, ಇದರಿಂದಾಗಿ ಘಟನೆ ಸಂಭವಿಸಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:38 PM IST