ಕರ್ನಾಟಕ

karnataka

ಸರ್ದಾರ್ ವಲ್ಲಭಭಾಯಿ ಪಟೇಲ್‌ ಭಾವಚಿತ್ರಕ್ಕೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ETV Bharat / videos

ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ.. ಸಚಿವರಿಂದ ಧ್ವಜವಂದನೆ ಸ್ವೀಕಾರ - ಸಚಿವ ಎನ್ ಎಸ್ ಬೋಸರಾಜು

By ETV Bharat Karnataka Team

Published : Sep 17, 2023, 4:44 PM IST

ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ(ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ)ವನ್ನು ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ರಾಷ್ಟ್ರಧ್ವಜಾರೋಹಣ‌ ನೆರವೇರಿಸಿದರು. ಬಳಿಕ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ,‌ ಶಾಲಾ-ಕಾಲೇಜು ವಿಧ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಚಿವರು ಧ್ವಜವಂದನೆ ಸ್ವೀಕರಿಸಿದ ನಂತರ ಆಕರ್ಷಕ ಪಥಸಂಚಲನ ನಡೆಯಿತು. ಇದಾದ ನಂತರ ಸಚಿವರು ಮಾತನಾಡಿ ನಾಡಿನ ಜನತೆಗೆ ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ಕೋರಿದರು.

ಇದಕ್ಕೂ ಮುನ್ನ ಪಟೇಲ್ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಪೂಜೆ ನೆರವೇರಿಸಿ, ಮಾಲಾರ್ಪಣೆ ಮಾಡಿದರು. ಈ ವೇಳೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಖಾತೆ ಸಚಿವ ಎನ್ ಎಸ್ ಬೋಸರಾಜು, ಶಾಸಕ ಬಸವನಗೌಡ ದದ್ದಲ್, ವಿವಿಧ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಭಾಗವಹಿಸಿದ್ದರು.

ದೇಶಕ್ಕೆ 1947ನೇ ಆಗಸ್ಟ್ 15 ರಂದು ಸ್ವಾತಂತ್ರ್ಯ ಲಭಿಸಿತ್ತು. ಆದರೆ ಕಲ್ಯಾಣ ಕರ್ನಾಟಕ ಹೈದ್ರಾಬಾದ್​ ನಿಜಾಮರ ಆಳ್ವಿಕೆ ಕಪಿಮುಷ್ಠಿಯಲ್ಲಿ ಇತ್ತು. ಅಂದಿನ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರು 1948ರ ಸೆ.17 ರಂದು ನಿಜಾಮರ ಆಳ್ವಿಕೆಯನ್ನು ಕೊನೆಗೊಳಿಸಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟಿದ್ದರು. ಅಂದಿನಿಂದ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ) ಉತ್ಸವವನ್ನು ಆಚರಿಸುತ್ತ ಬರಲಾಗುತ್ತಿದೆ.

ಇದನ್ನೂಓದಿ:ಕಲ್ಯಾಣ​ ಕರ್ನಾಟಕ ವಿಮೋಚನಾ ದಿನ: ಕಲಬುರಗಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಿಎಂ

ABOUT THE AUTHOR

...view details