ಬೊಮ್ಮಾಯಿ ವೋಟ್ ಮಾಡುವ ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರಿಂದ ಪೂಜೆ- ವಿಡಿಯೋ - ಸರ್ಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆ
ಶಿಗ್ಗಾಂವಿ (ಹಾವೇರಿ): ಸಿಎಂ ಬಸವರಾಜ ಬೊಮ್ಮಾಯಿ ಮತದಾನ ಮಾಡುವ ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102 ರ ಸರ್ಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9 ಗಂಟೆಗೆ ವೋಟ್ ಮಾಡಲಿದ್ದಾರೆ. ಅದಕ್ಕೂ ಮುನ್ನ ಪಕ್ಷದ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಮಾಡಿದರು. ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾನ ಕೆಂದ್ರದಲ್ಲಿ ಭದ್ರತೆಗಾಗಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ.
ಬಸವರಾಜ ಬೊಮ್ಮಾಯಿ ಸ್ಪರ್ಧೆ:ಹಾವೇರಿ ಜಿಲ್ಲೆಯ ಆರು ವಿಧಾನಸಭೆಯ ಕ್ಷೇತ್ರಗಳಲ್ಲಿ ಸಿಎಂ, ಸಚಿವ ಮತ್ತು ಮಾಜಿ ಸಚಿವರು ಸ್ಪರ್ಧೆಯಲ್ಲಿದ್ದಾರೆ. ಶಿಗ್ಗಾಂವಿ ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾಗಿದ್ದು, ಇಲ್ಲಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ. ಸತತ ಮೂರು ಬಾರಿ ಜಯ ಗಳಿಸಿರುವ ಬೊಮ್ಮಾಯಿ ನಾಲ್ಕನೇಯ ಬಾರಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2.25 ಲಕ್ಷ ಮತದಾರರಿದ್ದಾರೆ. ಪುರುಷರು 1,15,453 ಮತ್ತು ಮಹಿಳೆಯರು 1,08,321 ಮತ ಚಲಾಯಿಸಲಿದ್ದಾರೆ.
ಇದನ್ನೂ ಓದಿ:ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 60 ಅಭ್ಯರ್ಥಿಗಳು ಸ್ಪರ್ಧೆ