ಹಾವೇರಿಯಲ್ಲಿ ಟ್ರಕ್‌ಗಳ ಡಿಕ್ಕಿ: ಧಗಧಗನೆ ಹೊತ್ತಿ ಉರಿದ ವಾಹನಗಳು-ವಿಡಿಯೋ - ಶಿಗ್ಗಾಂವ್ ಬಳಿ ರಾಷ್ಟ್ರೀಯ ಹೆದ್ದಾರಿ 48
ಹಾವೇರಿ:ಜಿಲ್ಲೆಯ ಶಿಗ್ಗಾಂವ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ನಸುಕಿನ ಜಾವ ಎರಡು ಟ್ರಕ್‌ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಉಂಟಾದ ಬೆಂಕಿಯ ಕೆನ್ನಾಲಿಗೆಗೆ ಟ್ರಕ್‌ಗಳು ಸುಟ್ಟು ಕರಕಲಾಗಿವೆ. ಚಾಲಕರು ವಾಹನದಿಂದ ಇಳಿದು ಪ್ರಾಣ ಕಾಪಾಡಿಕೊಂಡಿದ್ದಾರೆ.
ಇದನ್ನೂ ಓದಿ:ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಅಗ್ನಿ ದುರಂತದ ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಯ ಕೆನ್ನಾಲಿಗೆ ಸಿಲುಕಿರುವ ಟ್ರಕ್‌ಗಳು ಸುಟ್ಟು ಕರಕಲಾಗಿವೆ. ಈ ಕುರಿತ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಶಿಗ್ಗಾಂವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ವಾಹನಗಳು ಬೆಂಕಿ ಅನಾಹುತಕ್ಕೆ ಸಿಲುಕಿ ಧಗಧಗನೆ ಹೊತ್ತಿ ಉರಿಯುತ್ತಿರುವ ವಿಡಿಯೋ ಲಭ್ಯವಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಬಟ್ಟೆ ತುಂಬಿದ ಲಾರಿಗೆ ಹಿಂದಿನಿಂದ ಸ್ಪಿರಿಟ್ ಲಾರಿ ಡಿಕ್ಕಿ: ಹೊತ್ತಿ ಉರಿದ ಲಾರಿಗಳು - ವಿಡಿಯೋ