ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
Published : Nov 1, 2023, 12:59 PM IST
ಶಿವಮೊಗ್ಗ : 1973 ರಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ವಿಶಾಲ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. ಈ ಹಿನ್ನೆಲೆ ರಾಜ್ಯಾದ್ಯಂತ ಕರ್ನಾಟಕ ಸುವರ್ಣ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಇನ್ನೊಂದೆಡೆ, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಾದ್ಯಾಂತ 68 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ಸಂತಸದಿಂದ ಆಚರಿಸಲಾಗಿದೆ.
ಜಿಲ್ಲಾಡಳಿತದ ವತಿಯಿಂದ ನಗರದ ಡಿ ಎ ಆರ್ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಕಾರ್ಯಕ್ರಮಕ್ಕೆ ಗೈರಾದ ಹಿನ್ನೆಲೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣಕ್ಕೂ ಮುನ್ನ ಮಹಾತ್ಮರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಿಲ್ಲಾಡಳಿತದ ವತಿಯಿಂದ ವಿವಿಧ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಸಲಾಯಿತು.
ಇದನ್ನೂ ಓದಿ :68 ನೇ ಕರ್ನಾಟಕ ರಾಜ್ಯೋತ್ಸವ : ಕಂಠೀರವ ಸ್ಟೇಡಿಯಂನಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ