ಕಾರು ಅಪಘಾತದಲ್ಲಿ ಕೇರಳದ ದಂಪತಿ ದಾರುಣ ಸಾವು - Kerala couple dies in car accident
Published : Dec 8, 2023, 1:50 PM IST
ತಿರುಚ್ಚಿ (ಕೇರಳ):ತಿರುವಾನೈಕಾವಲ್ ಚೆಕ್‌ಪೋಸ್ಟ್ ಬಳಿ ತಿರುಚ್ಚಿ- ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಕೊಲ್ಲಿಡಂ ನದಿ ಸೇತುವೆಯಿಂದ ಕಾರು ಪಲ್ಟಿಯಾಗಿ ಸುಮಾರು 50 ಅಡಿಗಳಷ್ಟು ಕಳಗೆ ಉರುಳಿ ಬಿದ್ದ ಪರಿಣಾಮ ಕೇರಳದ ಎರ್ನಾಕುಲಂ ಮೂಲದ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು (ಶುಕ್ರವಾರ) ನಡೆದಿದೆ.
ಕಾರು ಅಪಘಾತದಲ್ಲಿ ಶ್ರೀನಾಥ್ ಮತ್ತು ಅವರ ಪತ್ನಿ ಎಂದು ಗುರುತಿಸಲಾಗಿದ್ದು, ಚೆನ್ನೈಗೆ ತೆರಳುತ್ತಿದ್ದಾಗ ಅವರ ವಾಹನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ನಡೆದಿದೆ. ಪತಿ, ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಶ್ರೀರಂಗಂ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಗಿದೆ. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕ್ರೇನ್ ಬಳಸಿ, ಪಲ್ಟಿಯಾದ ಕಾರಿನೊಂದಿಗೆ ಮೃತರ ದೇಹಗಳನ್ನು ಯಶಸ್ವಿಯಾಗಿ ಹೊರತೆಗೆಯಲಾಯಿತು.
ಈ ಅಪಘಾತದಿಂದಾಗಿ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾತ್ಕಾಲಿಕ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡಿದರು. ತಿರುಚ್ಚಿ ಮೆಟ್ರೋಪಾಲಿಟನ್ ಪೊಲೀಸ್ ಕಮಿಷನರ್ ಕಾಮಿನಿ ಅವರು ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಸ್ಥಳಕ್ಕೆ ಭೇಟಿ ನೀಡಿದರು. ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣ ತಿಳಿಯಲು ಅಧಿಕಾರಿಗಳು ಸಮಗ್ರ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ವಾರಣಾಸಿ: ಧರ್ಮಶಾಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ