ಕರ್ನಾಟಕ

karnataka

ETV Bharat / videos

ಮೊಸರು ಕುಡಿಕೆ ಒಡೆಯುವ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಸಿಎಂ ಚೌಹಾಣ್​​ - ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಸಿಎಂ ಚೌಹಾಣ್​

By

Published : Aug 20, 2022, 9:50 AM IST

Updated : Feb 3, 2023, 8:27 PM IST

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪ್ರತಿ ವರ್ಷದಂತೆ ಈ ವರ್ಷವೂ ಮೊಸರು ಕುಡಿಕೆ ಒಡೆಯುವ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಿಸಿ ಭಜನೆ ಮಾಡಿದರು. ಭೋಪಾಲ್‌ನಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ಶಿವರಾಜ್​ ಸಿಂಗ್​ಗೆ ಪಕ್ಷದ ನಾಯಕರು ಸೇರಿದಂತೆ ಶ್ರೀಕೃಷ್ಣನ ಇತರ ಭಕ್ತರೂ ಸಾಥ್​ ನೀಡಿದರು. ಕೃಷ್ಣ ಜನ್ಮಾಷ್ಟಮಿ ಹಬ್ಬದಲ್ಲಿ ಶಿವರಾಜ್ ಸಿಂಗ್ ಭಕ್ತಿಯಿಂದ ಕಾಣುತ್ತಿದ್ದರು. ಶಿವರಾಜ್ ಸಿಂಗ್ ತಮ್ಮ ಪತ್ನಿಯೊಂದಿಗೆ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾಜ್ ಸಿಂಗ್ ಚೌಹಾಣ್​​​ ಮೊಸರು ಕುಡಿಕೆ ಒಡೆಯುತ್ತಿರುವ ದೃಶ್ಯಗಳನ್ನು ಸ್ಥಳೀಯರು ತಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಈ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಗರದ ಅನೇಕ ಸ್ಥಳಗಳಲ್ಲಿ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
Last Updated : Feb 3, 2023, 8:27 PM IST

For All Latest Updates

ABOUT THE AUTHOR

...view details