ಸ್ಟೇರಿಂಗ್ ಲಾಕ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ಭಾರಿ ಅನಾಹುತ - ಈಟಿವಿ ಭಾರತ ಕನ್ನಡ
ಮಂಡ್ಯ : ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ಲಾಕ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ನಡೆದಿದೆ. ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ಬಸ್ ಕನಗನಮರಡಿ ಗೇಟ್ ಬಳಿ ತಲುಪುತ್ತಿದ್ದಂತೆ ಬಸ್ ಸ್ಟೇರಿಂಗ್ ಲಾಕ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ, ಸಾರಿಗೆ ಬಸ್ ಕಬ್ಬಿನ ಗದ್ದೆಗೆ ಏಕಾಏಕಿ ನುಗ್ಗಿದೆ.
ಬಸ್ನಲ್ಲಿ ಹಲವು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದಿಂದ ತಮಿಳುನಾಡಿಗೆ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ತಂಜಾವೂರು ಸಮೀಪ ಅಪಘಾತಕ್ಕೀಡಾಗಿ ನಾಲ್ವರು ಸಾವನ್ನಪ್ಪಿದ್ದ ಘಟನೆ ಭಾನುವಾರ ನಡೆದಿತ್ತು. ಘಟನೆಯಲ್ಲಿ ಒಟ್ಟು 38 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟು 51 ಕೇರಳದ ತ್ರಿಶೂರಿನ ಪ್ರವಾಸಿಗರು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೆಲಂಕನ್ನಿ ಚರ್ಚ್‌ಗೆ ಭೇಟಿ ನೀಡಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಹುಬ್ಬಳ್ಳಿ: ಗೋಡಾನ್ ಗೋಡೆಗೆ ಸಾರಿಗೆ ಬಸ್ ಡಿಕ್ಕಿ; 15ಕ್ಕೂ ಹೆಚ್ಚು ಮಂದಿಗೆ ಗಾಯ