ಸಾರಿಗೆ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ಉಳಿದವು 40 ಬಡ ಜೀವಗಳು! - KSRTC bus brake fail
Published : Sep 22, 2023, 7:19 PM IST
ದಾವಣಗೆರೆ: ಸಾರಿಗೆ ಇಲಾಖೆಯ ಬಸ್ ಬ್ರೇಕ್ ಫೇಲ್ ಆಗಿದ್ದು ಭಾರೀ ದುರಂತವೊಂದು ತಪ್ಪಿದ ಘಟನೆ ದಾವಣಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 04ರ ಹೆಬ್ಬಾಳ್ ಟೋಲ್ ಗೇಟ್ ಬಳಿ ಇಂದು ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ 40 ಬಡ ಜೀವಗಳು ಪ್ರಾಣಾಪಾಯದಿಂದ ಪಾರಾಗಿವೆ.
ಚಿತ್ರದುರ್ಗದಿಂದ ದಾವಣಗೆರೆಯತ್ತ ಬರುತ್ತಿದ್ದ ಬಸ್ ಹೆಬ್ಬಾಳ್ ಟೋಲ್ ಗೇಟ್ ಬಳಿ ಇದ್ದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಈ ವೇಳೆ ಚಾಲಕ ಬಸವರಾಜ್ ಪ್ರಯಾಣಿಕರ ಪ್ರಾಣ ಉಳಿಸಲು ಪ್ರಯತ್ನಿಸಿದರೂ ಬಸ್ ಮಾತ್ರ ನಿಯಂತ್ರಣಕ್ಕೆ ಸಿಕ್ಕಿಲ್ಲ. ಟೋಲ್ ಗೇಟ್ ಹಳಿ ಬರುತ್ತಿದ್ದಂತೆ ಮೊದಲು ಅಲ್ಲಿದ್ದ ಚರಂಡಿಯ ಮೇಲೆ ಹತ್ತಿಸಿ ಅದರ ವೇಗ ತಗ್ಗಿಸಿದ್ದಾರೆ. ನಿಯಂತ್ರಣಕ್ಕೆ ಬಂದ ಬಳಿಕ ಖಾಲಿ ಜಾಗದಲ್ಲಿ ಬಸ್ ಅನ್ನು ನಿಲ್ಲಿಸುವಲ್ಲಿ ಬಸವರಾಜ್ ಯಶಸ್ವಿಯಾಗಿದ್ದಾರೆ. ಅಲ್ಲಿಯವರೆಗೂ ಭಯದಲ್ಲಿದ್ದ 40 ಪ್ರಯಾಣಿಕರು, ಬಸ್ ಸುರಕ್ಷಿತವಾಗಿ ನಿಲ್ಲುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ.
ತಮ್ಮ ಜೀವ ಉಳಿಸಿದ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಾಲಕ ಸೇರಿದಂತೆ ಕೆಲ ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ನ್ಯೂಯಾರ್ಕ್ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ: ಇಬ್ಬರು ಸಾವು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ