ಕರ್ನಾಟಕ

karnataka

ಬಡ ಮಹಿಳೆಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ಕುಣಿಗಲ್ ಶಾಸಕ

ETV Bharat / videos

ಕುಣಿಗಲ್ ಶಾಸಕ ಡಾ.ರಂಗನಾಥ್ ಅವರಿಂದ ಬಡ ಮಹಿಳೆಗೆ ಉಚಿತ ಶಸ್ತ್ರಚಿಕಿತ್ಸೆ: ವಿಡಿಯೋ - etv bharat kannada

By

Published : Jun 27, 2023, 5:00 PM IST

ತುಮಕೂರು:ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರು ಬಡ ಮಹಿಳೆಯೊಬ್ಬರಿಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎಂಬವರಿಗೆ ಕೀಲು ಡಿಸ್‌ಲೊಕೋಟ್ ಆಗಿತ್ತು. ಶಸ್ತ್ರಚಿಕಿತ್ಸೆ ಮಾಡಲು 4- 5 ಲಕ್ಷ ರೂ ಖರ್ಚಾಗುತಿತ್ತು. ಈ ಬಗ್ಗೆ ಮಹಿಳೆ ಶಾಸಕರ ಬಳಿ ಬಂದು ನೋವು ತೋಡಿಕೊಂಡಿದ್ದರು. ಇದಾದ ನಂತರ ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ, ಶಾಸಕ ಡಾ.ರಂಗನಾಥ್ ಅವರೇ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದರು. 

10 ವರ್ಷಗಳ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದ ಆಶಾ ಅವರಿಗೆ ಪುನಃ ಕೀಲು ಡಿಸ್‌ಲೊಕೇಟ್ ಆಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು.

ಡಾ.ರಂಗನಾಥ್ ಅವರು ಮೂಲತಃ ಆರ್ಥೋಪೆಡಿಕ್ ವೈದ್ಯರು. ಬಡ ಮಹಿಳೆಗೆ ಉಚಿತವಾಗಿ ಚಿಕಿತ್ಸೆ ನೀಡಿದ ಶಾಸಕರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:ಕೈಕೊಟ್ಟ ಮಳೆ: ಗೊಂಬೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ ಜನ

ABOUT THE AUTHOR

...view details