ಸಿದ್ದರಾಮಯ್ಯರನ್ನು ಬೆಂಬಲಿಸಿ ಕೋಲಾರದಲ್ಲಿ ಕುರುಬ ಸಮಾಜದ ಸಭೆ - ವರ್ತೂರ್ ಪ್ರಕಾಶ್
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಹಿನ್ನೆಲೆ ಕ್ಷೇತ್ರದ ಕುರುಬ ಸಮುದಾಯದ ಮುಖಂಡರ ಸಭೆ ನಡೆಯಿತು. ಕಾವೇರಿ ನಿಗಮದ ನಿವೃತ್ತ ಮುಖ್ಯ ಎಂಜಿನಿಯರ್ ಚಿಕ್ಕರಾಯಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯನ್ನು ಕೋಲಾರ ಹೊರವಲಯದ ಕೋಡಿಕಣ್ಣೂರು ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. 500 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕುರುಬ ಸಮುದಾಯ ಅವರ ಬೆನ್ನೆಲುಬಾಗಿ ಅವರ ಪರ ಕೆಲಸ ಮಾಡಬೇಕು. ಮುಖಂಡರು ಕ್ಷೇತ್ರವಾರು ಮನೆ ಮನೆಗೆ ತೆರಳಿ ಸಿದ್ದರಾಮಯ್ಯ ಪರ ಪ್ರಚಾರ ಮಾಡಬೇಕೆಂದು ನಿರ್ಧರಿಸಲಾಯಿತು. ಈಗಾಗಲೇ ವರ್ತೂರ್ ಪ್ರಕಾಶ್ ಅವರಿಗೆ ಎರಡು ಬಾರಿ ಅವಕಾಶ ನೀಡಿದ್ದೇವೆ. ಈ ಬಾರಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಲಾಗುತ್ತದೆ ಸಮುದಾಯದ ಮುಖಂಡರು ತಿಳಿಸಿದರು.
ಇದನ್ನೂಓದಿ:ಪತ್ನಿ ಮೇಲೆ ಅನೈತಿಕ ಸಂಬಂಧ ಶಂಕೆ: ಹೆತ್ತ ಮಕ್ಕಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಂದೆ