ಆಕಸ್ಮಿಕ ಬೆಂಕಿ: ಮನೆಯಲ್ಲಿದ್ದ ಲಕ್ಷಾಂತರ ರೂ. ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮ - ಬೆಂಕಿ
ಕೊಡಗು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬ್ಯಾಡಗೊಟ್ಟ ಗ್ರಾಮದಲ್ಲಿ ಬಿ.ಎಂ. ಅಬ್ದುಲ್ ಲತೀಫ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣವಾಗಿ ನಾಶವಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ.
Last Updated : Feb 3, 2023, 8:34 PM IST